ಪುಣಚ ಶ್ರೀದೇವಿ ವಿದ್ಯಾಕೇಂದ್ರದಲ್ಲಿ ದಿನಾಂಕ 26/7/24 ರಂದು *ಕಾರ್ಗಿಲ್ ವಿಜಯೋತ್ಸವ – ಯೋಧ ನಮನ – ಗುರು ನಮನ* ಕಾರ್ಯಕ್ರಮ ನಡೆಯಿತು.
ಅತಿಥಿಗಳಾಗಿ ಆಗಮಿಸಿದ ಭಾರತೀಯ ವಾಯುಸೇನೆಯ ನಿವೃತ್ತ ಸಾರ್ಜೆಂಟ್ ಆದ ಶ್ರೀ ಪ್ರಕಾಶ್ ಭಟ್ ಕುಕ್ಕಿಲ ಇವರು ಕಾರ್ಗಿಲ್ ವಿಜಯ ದಿವಸದ ಬಗ್ಗೆ ಮಾತನಾಡಿ ವಿದ್ಯಾರ್ಥಿಗಳಿಗೆ ಸೇನೆಗೆ ಸೇರಿ ದೇಶಸೇವೆ ಮಾಡುವಂತೆ ಪ್ರೇರೇಪಿಸಿದರು.
ಮತ್ತೋರ್ವ ಮುಖ್ಯ ಅತಿಥಿ ಶ್ರೀ ಜಯಾನಂದ ಪೆರಾಜೆ ,ನಿವೃತ್ತ ಶಿಕ್ಷಕರು ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕ ಇವರು ಮಾನವನ ಜೀವನದಲ್ಲಿ ಗುರುವಿನ ಪಾತ್ರದ ಬಗ್ಗೆ ತಿಳಿಸಿಕೊಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರ್ಗಿಲ್ ಯುದ್ಧದಲ್ಲಿ ಭಾಗಿ ಆದ ನಿವೃತ್ತ ಯೋಧ, ವಿದ್ಯಾ ಕೇಂದ್ರದ ಆಡಳಿತ ಮಂಡಳಿಯ ಸದಸ್ಯರೂ ಆದ ಶ್ರೀ ಈಶ್ವರ ನಾಯ್ಕ ಬೇರಿಕೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷರನ್ನು & ಮುಖ್ಯ ಅತಿಥಿಗಳನ್ನು ಸನ್ಮಾನಿಸಲಾಯಿತು.
ಆಡಳಿತ ಮಂಡಳಿಯ ಪದಾಧಿಕಾರಿಗಳು ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು , ಬೋಧಕೇತರ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.