ಶ್ರೀದೇವಿ ವಿದ್ಯಾಕೇಂದ್ರದಲ್ಲಿ ವಿಟ್ಲ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಬಾಲಕಿಯರ ಖೋ- ಖೋ ಪಂದ್ಯಾಟ

ಶ್ರೀದೇವಿ ವಿದ್ಯಾಕೇಂದ್ರ ದೇವಿನಗರ ಪುಣಚದಲ್ಲಿ ವಿಟ್ಲ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಬಾಲಕಿಯರ ಖೋ- ಖೋ ಪಂದ್ಯಾಟವನ್ನು ದಿನಾಂಕ 13-09-2024 ರ ಶುಕ್ರವಾರದಂದು ನಡೆಸಲಾಯಿತು. ಪುಣಚ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಶ್ರೀಮತಿ ಬೇಬಿ ಇವರು ದೀಪವನ್ನು ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾದ ಪುಣಚ ಗ್ರಾಮ ಪಂಚಾಯತ್ ನ ಸದಸ್ಯರು, ಕ್ರೀಡಾ ಸಂಯೋಜಕರು, ಆಡಳಿತ ಮಂಡಳಿಯವರು ಮತ್ತು ಪ್ರಾಥಮಿಕ ಹಾಗೂ ಪ್ರೌಢಶಾಲಾ ಮುಖ್ಯ ಗುರುಗಳು ಉಪಸ್ಥಿತರಿದ್ದರು.ಪಂದ್ಯಾಟದಲ್ಲಿ ಶ್ರೀದೇವಿ ವಿದ್ಯಾಕೇಂದ್ರದ 14 ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಸ್ಥಾನ ಹಾಗೂ 17 ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.